Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕೌಟುಂಬಿಕ ವಿರಸ : ಬೆಳ್ತಂಗಡಿಯ ಯುವ ಇಂಜಿನಿಯರ್ ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ :  ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ನಡೆದಿದೆ. ಮೃತರು ಪದ್ಮಾವತಿ (29) ಹಾಗೂ ಸುಮಂತ್ ಜೈನ್ (32) ಎಂಬವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಗೆ ಗ್ರಾಮದ ಎಳನೀರು ನಿವಾಸಿಯಾಗಿರುವ ಸುಮಂತ್ ಜೈನ್(32) ಸಿವಿಲ್ ಎಂಜಿನಿಯರ್ ಆಗಿದ್ದರು. ಹುಬ್ಬಳಿ ಮೂಲದ ಪದ್ಮಾವತಿ(29) ವೈಟ್ ಫೀಲ್ಡ್ ಸಮೀಪದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಆ.13 ರಂದು ಮಧ್ಯರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿರುವುದಾಗಿಯೂ ತಿಳಿದು ಬಂದಿದೆ

ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ ಎನ್ನಲಾಗಿದ್ದು ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ. ಆ.14ರಂದು ಮನೆಯವರು ಬೆಂಗಳೂರಿಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾಜಗೋಪಾಲನಗರ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement