Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬದಿಯಡ್ಕದಲ್ಲಿ ಯುವಕರ ಮೇಲೆ ಹಲ್ಲೆ : ಎರಡು ಪ್ರತ್ಯೇಕ ಘಟನೆಗಳಲ್ಲಿ 7 ಮಂದಿಯ ವಿರುದ್ಧ ಪ್ರಕರಣ ದಾಖಲು

ಬದಿಯಡ್ಕ : ಬದಿಯಡ್ಕದಲ್ಲಿ ನಡೆದ ಎರಡು ಪ್ರತ್ಯೇಕ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಾಲ್ವರು ಯುವಕರ ಮೇಲೆ ಹಲ್ಲೆ ನಡೆದಿರುವುದಾಗಿ ದೂರು ನೀಡಲಾಗಿದೆ.

ಬದಿಯಡ್ಕದ ಮೊಹಮ್ಮದ್ ಆಶಿಕ್ ನೀಡಿದ ದೂರಿನ ಆಧಾರದ ಮೇಲೆ ಪುಷ್ಪನ್ ಹಾಗೂ ಗುರುತು ಪತ್ತೆಯಾಗದ ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಬಿದಿನದ ಅಂಗವಾಗಿ ಧ್ವಜ ಹಾಗೂ ಅಲಂಕಾರಗಳನ್ನು ಕಟ್ಟುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ತಡೆದು ನಿಲ್ಲಿಸಿ ತಾನು ಹಾಗೂ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಶಿಕ್ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಬದಿಯಡ್ಕ ವಳಮಲೆಯ ಧನ್ವಿಶ್ ಶೆಟ್ಟಿ ನೀಡಿದ ದೂರಿನ ಆಧಾರದ ಮೇಲೆ ಸುಹೈಲ್, ಹಸನ್ ಶಾಹ್, ಫಾಯಿಸ್ ಹಾಗೂ ಗುರುತು ಪತ್ತೆಯಾಗದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸ್ನೇಹಿತನ ಮಾಲೀಕತ್ವದ ಅಂಗಡಿ ಮುಚ್ಚಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ತಮ್ಮನ್ನು ಕಾರು ಮತ್ತು ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ತಮಗೆ ಮತ್ತು ಸ್ನೇಹಿತ ವಿಶ್ವನಾಥ್ ಅವರ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಧನ್ವಿಶ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

ಎರಡೂ ಘಟನೆಗಳ ಕುರಿತು ಬದಿಯಡ್ಕ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement