ಕಯ್ಯಾರು: ಕಯ್ಯಾರು ಡೋನ್ ಬಾಸ್ಕೋ ಎಯುಪಿ ಶಾಲೆಯಲ್ಲಿ ಓಣಂ ಆಚರಣೆಯ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಶಾಲಾ ಮುಖ್ಯ ಶಿಕ್ಷಕ ಪೀಟರ್ ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರವೀಣ್ ಪ್ರಕಾಶ್ ಕ್ರಾಸ್ತ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಭವ್ಯ ಬಾನೊಟ್ಟು,ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.ಶಿಕ್ಷಕ ಅಸೀಸ್ ಅವರು ಓಣಂ ಹಬ್ಬ ಆಚರಣೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪಿಎಸ್ ಸಿಯಲ್ಲಿ ದ್ವಿತೀಯ ರಾಂಕ್ ವಿಜೇತ ಶಾಲಾ ಶಿಕ್ಷಕಿ ಶಶಿಪ್ರಭಾ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಮೆಗಾ ತಿರುವಾದಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

0 Comments