Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ದೇವಸ್ಥಾನದಿಂದ ಪ್ರಾರ್ಥನೆ ಮುಗಿಸಿ ಹೊರಬಂದ 17 ವರ್ಷದ ಬಾಲಕಿಯನ್ನು ಪಾರ್ಕಿಗೆ ಎಳೆದೊಯ್ದು ಅತ್ಯಾಚಾರ : ಓರ್ವ ಪೊಲೀಸ್ ವಶಕ್ಕೆ

ದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕಲ್ಕಾಜಿ ಮಂದಿರದ ಸಮೀಪದ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮೂಲದ ಬಾಲಕಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ತನ್ನಸ್ನೇಹಿತನೊಂದಿಗೆ ಕಲ್ಕಾಜಿ ದೇವಸ್ಥಾನಕ್ಕೆ ತೆರಳಿದ್ದಳು. ಪ್ರಾರ್ಥನೆ ಮುಗಿಸಿದ ಬಳಿಕ ರಾತ್ರಿ 7.30ರ ಸುಮಾರಿಗೆ ಇಬ್ಬರೂ ಕಲ್ಕಾಜಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನದ ನಡುವಿನ ಆಸ್ಥಾ ಕುಂಜ್ ಉದ್ಯಾನವನಕ್ಕೆ ತೆರಳಿದ್ದರು.

ಈ ವೇಳೆ 25ರಿಂದ 30 ವರ್ಷದೊಳಗಿನ ಮೂವರು ಯುವಕರು ಅವರ ಬಳಿ ಬಂದು ತಾವು ಪೊಲೀಸರು ಎಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ಬಾಲಕಿಯನ್ನು ಬೆದರಿಸಿ ಉದ್ಯಾನವನದೊಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ದೊರೆತ ಬಳಿಕ ರಾತ್ರಿ 8.45ರ ಸುಮಾರಿಗೆ ಪೊಲೀಸರು ಸ್ಥಳಕ್ಕೆ ತೆರಳಿದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನಿಖೆಯ ವೇಳೆ ಉದ್ಯಾನವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Post a Comment

0 Comments

ಜಾಹೀರಾತು

Responsive Advertisement