ಮಂಗಳೂರು : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸುದೀರ್ಘ ತಟಸ್ಥ ಪ್ರಕರಣದ ಆರೋಪಿತೆಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಆರೋಪಿ ಲತಾ ಮಾರಿಯಾ (44) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.
ಆರೋಪಿಯ ವಿರುದ್ಧ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಹೊರಡಿಸಲಾಗಿತ್ತು. ನಂತರ ಪ್ರಕರಣವು ದೀರ್ಘ ತಟಸ್ಥ ಪ್ರಕರಣವಾಗಿ ದಾಖಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ, ಜ್ಯೋತಿನಗರದಿಂದ ಲತಾ ಮಾರಿಯಾಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಇಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0 Comments