ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಹಾಗೂ ಸಮಾಜಮುಖಿ ಸೇವೆಗಾಗಿ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ.
ಆರ್ಯಭಟ ಎಜುಕೇಶನಲ್ ಟ್ರಸ್ಟ್ ಹಾಗೂ ಕರ್ನಾಟಕ ಚೇತನ ಫೌಂಡೇಷನ್, ಧಾರವಾಡ ವತಿಯಿಂದ ಸೆ. 6ರಂದು ಬೆಂಗಳೂರಿನ ಎನ್.ಆರ್. ಕಾಲೋನಿಯ ಬಿ.ಎಂ. ಶ್ರೀ ಪ್ರತಿಷ್ಠಾನದ ಸಭಾಂಗಣದಲ್ಲಿ ‘ಸಾಧಕರ ಸಮಾಗಮ’ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪದ್ಮನಾಭ ಶೇರುಗಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಶಿಕ್ಷಕ ಹಾಗೂ ಸಮಾಜ ಸೇವಕ ಬಿ. ರಂಗಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ನವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಎಂ.ಆರ್. ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’, ಶಿಕ್ಷಣ ಕ್ಷೇತ್ರದ ಸಾಧಕರಿಗೆ ‘ಡಾ. ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಹಾಗೂ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ.
ಕರ್ನಾಟಕ ಚೇತನ ಫೌಂಡೇಷನ್ ಅಧ್ಯಕ್ಷ ಹಾಗೂ ಜನತಾ ಪ್ರಭ ದಿನಪತ್ರಿಕೆಯ ಸಂಪಾದಕ ಚಂದ್ರಶೇಖರ ಮಾಡಲಗೇರಿ ಅವರು ಕಾರ್ಯಕ್ರಮದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪದ್ಮನಾಭ ಶೇರುಗಾರ್ ಅವರಿಗೆ ದೊರೆತಿರುವ ಈ ರಾಷ್ಟ್ರೀಯ ಗೌರವವು ಅವರ ಸಾಮಾಜಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳ ಸಾಧನೆಗೆ ಮತ್ತಷ್ಟು ಪ್ರೋತ್ಸಾಹ ನೀಡಲಿದೆ ಎಂದು ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್, ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಎಚ್. ಶಶಿಧರ್ ನಾಯ್ಕ್, ಅಖಿಲ ಕರ್ನಾಟಕ ಕೋಟೆಗಾರ್ ಸಂಘದ ಅಧ್ಯಕ್ಷ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಸೇರಿದಂತೆ ಹಿತೈಷಿಗಳು ಶುಭ ಹಾರೈಸಿದ್ದಾರೆ.

0 Comments