Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ರಾಜಸ್ಥಾನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ : ಪ್ರಧಾನಿ ಮೋದಿ ಅಭಿನಂದನೆ

 

ಜೈಪುರ: ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 10 ಮಹಾನಗರ ಪಾಲಿಕೆಗಳ ಪೈಕಿ 4ರಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ, ಒಟ್ಟಾರೆ 4,179 ವಾರ್ಡ್‌ಗಳಲ್ಲಿ ಜಯಭೇರಿ ಬಾರಿಸಿದೆ. ವಿರೋಧ ಪಕ್ಷವಾದ ಕಾಂಗ್ರೆಸ್ 3,613 ವಾರ್ಡ್‌ಗಳನ್ನು ತನ್ನದಾಗಿಸಿಕೊಂಡಿದೆ. ರಾಜ್ಯ ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ ಎಣಿಕೆ ನಡೆದ 10,244 ವಾರ್ಡ್‌ಗಳ ಪೈಕಿ 10,235 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದೆ. ಜೈಪುರ, ಉದಯಪುರ, ಕೋಟಾ ಮತ್ತು ಭಿಲ್ವಾರಾ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಸರಳ ಬಹುಮತ ಪಡೆದುಕೊಂಡಿದೆ.

ಕಾಂಗ್ರೆಸ್ ಪಕ್ಷವು ಬಿಕಾನೇರ್ ಮಹಾನಗರ ಪಾಲಿಕೆಯಲ್ಲಿ ಬಹುಮತ ಗಳಿಸಿದ್ದು, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಭದ್ರಕೋಟೆ ಎಂದೇ ಪರಿಗಣಿಸಲಾದ ಝಾಲಾವಾಡ್ ನಗರ ಪರಿಷತ್ತಿನಲ್ಲಿ ಗಮನಾರ್ಹ ಜಯ ದಾಖಲಿಸಿದೆ.

Post a Comment

0 Comments

ಜಾಹೀರಾತು

Responsive Advertisement