ಮೂಡುಬಿದಿರೆ : ಬಿಜೆಪಿಯ ಯುವ ಮುಖಂಡ ಪ್ರತೀಕ್ ಶೆಟ್ಟಿ ಕಿನ್ನಿಗೋಳಿ (40) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.
ಮುಲ್ಕಿ, ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಅವರು ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೂಡುಬಿದಿರೆ, ಮುಲ್ಕಿ ಜಿಲ್ಲಾ ಬಿಜೆಪಿಯಲ್ಲೂ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಉದ್ಯಮಿಯಾಗಿದ್ದ ಅವರು ಪತ್ನಿ, ಪುತ್ರಿ ಸಹಿತ ಕುಟುಂಬಸ್ಥರನ್ನು ಅಗಲಿದ್ದಾರೆ.

0 Comments