Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸೆ. 28ರಿಂದ 30ರವರೆಗೆ ನಡೆಯಬೇಕಿದ್ದ ಬ್ಯಾಂಕ್ ಮುಷ್ಕರ ಮುಂದೂಡಿಕೆ


ನವದೆಹಲಿ: ಸೆಪ್ಟೆಂಬರ್ 28ರಿಂದ 30ರವರೆಗೆ ನಡೆಯಬೇಕಿದ್ದ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಮುಂದೂಡಿದೆ ಎಂದು ಪ್ರಕಟಿಸಿದೆ.

ಸೆಪ್ಟೆಂಬರ್ 27ರಂದು ರಾತ್ರಿ 9:30ಕ್ಕೆ ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು UFBU ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. ಸಭೆಯಲ್ಲಿ ವಿವರವಾದ ಚರ್ಚೆ ನಡೆಸಿದ ಬಳಿಕ ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಯಿತು.

ಉಳಿದ ಶನಿವಾರಗಳನ್ನು ಬ್ಯಾಂಕ್‌ಗಳಿಗೆ ರಜಾದಿನಗಳಾಗಿ ಘೋಷಿಸುವ ವಿಚಾರದಲ್ಲಿ ಚರ್ಚಿಸಲು IBA ಮತ್ತು UFBU ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ತಕ್ಷಣ ರಚಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು UFBU ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಿಂದ 30ರವರೆಗೆ ನಡೆಯಬೇಕಿದ್ದ ಮೂರು ದಿನಗಳ ಬ್ಯಾಂಕ್ ಮುಷ್ಕರ ಸದ್ಯಕ್ಕೆ ನಡೆಯುವುದಿಲ್ಲ.

Post a Comment

0 Comments

ಜಾಹೀರಾತು

Responsive Advertisement