ಬೆಂಗಳೂರು : ಅಂಗಡಿಯ ಗೋಡೆಗೆ ರಾಯಲ್ ಎನ್‌ಫೀಲ್ಡ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ನಡೆದಿದೆ. ವಚನ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳು. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಇಬ್ಬರೂ ಬೈಕ್‌ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಿನ ಜಾವ ಸುತ್ತಾಡಲು ಇಬ್ಬರೂ ಹೊರಟಿದ್ದರು ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಯಲಹಂಕ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

0 Comments