Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಲಾರಿಗೆ ಬೈಕ್ ಡಿಕ್ಕಿ: ಮೆಕ್ಯಾನಿಕ್ ದಾರುಣ ಸಾವು

ಬೆಳ್ತಂಗಡಿ : ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೆ.3ರಂದು ರಾತ್ರಿ ಚಾರ್ಮಾಡಿ ಸಮೀಪದ ಚಿಬಿದ್ರೆ ಬಳಿ ನಡೆದಿದೆ. ಮೃತರನ್ನು ಚಾರ್ಮಾಡಿ ಗ್ರಾಮದ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂದು ಗುರುತಿಸಲಾಗಿದೆ. ಉಜಿರೆಯ ಗ್ಯಾರೇಜೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅವರು, ರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಚಿಬಿದ್ರೆ ಬಳಿ ಎದುರಿನಿಂದ ತರಕಾರಿ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ದಯಾನಂದ ಗೌಡ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಘಟನೆ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement