ಕಾಸರಗೋಡು : 13 ವರ್ಷದ ಎಂಟನೇ ತರಗತಿ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಬಾಲಕಿಯ ತಂದೆ ಹಾಗೂ ಸೋದರಮಾವನ ಪುತ್ರನ ವಿರುದ್ಧ ಮಂಜೇಶ್ವರ ಪೊಲೀಸರು ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಗಳನ್ನು ದಾಖಲಿಸಿ ಬಂಧಿಸಿದ್ದಾರೆ.
ಪೊಲೀಸರಿಗೆ ಲಭ್ಯವಾದ ಮಾಹಿತಿಯ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಸೋದರಮಾವನ ಪುತ್ರ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಬಳಿಕ ಇತ್ತೀಚೆಗೆ ಓಣಂ ರಜೆಯ ಸಂದರ್ಭದಲ್ಲಿ ಬಾಲಕಿಯ ತಂದೆಯೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ದೂರು ನೀಡಲಾಗಿದೆ.
ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಾಲಕಿಯನ್ನು ವೈದ್ಯರ ಬಳಿಗೆ ಕರೆದೊಯ್ದಾಗ, ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಾಲಕಿಗೆ ಕೌನ್ಸೆಲಿಂಗ್ ನಡೆಸಿ ಮಾಹಿತಿ ಸಂಗ್ರಹಿಸಿದ ವೇಳೆ ದೌರ್ಜನ್ಯದ ವಿಚಾರ ಬೆಳಕಿಗೆ ಬಂದಿದೆ.
ಪರಿಶಿಷ್ಟ ವರ್ಗಕ್ಕೆ ಸೇರಿದ ಬಾಲಕಿ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
.jpeg)
0 Comments