Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆ ಕನಿಲದಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ

ಮಂಜೇಶ್ವರ : ಕನಿಲದ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ  ಗಣೇಶ್ ಪಾವೂರು ವಹಿಸಿದ್ದರು. ಉಪಾಧ್ಯಕ್ಷರಾದ ಗಂಗಾಧರ ದುರ್ಗಿಪಳ್ಳ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪ್ಪರ, ಖಜಾಂಚಿ  ಸುರೇಶ್ ಬಿ ಎಂ,  ಗೌರವಾಧ್ಯಕ್ಷರಾದ ವಿಶ್ವನಾಥ ಕುದ್ರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಶಾಲಾ ಪ್ರಾಂಶುಪಾಲರಾದ  ಮಂಜುಳಾ ಪಿ.ವಿ, ಅವರು ನೂತನ ಸಮಿತಿ ಸದಸ್ಯರನ್ನು ಸ್ವಾಗತಿಸಿ, ಶಾಲೆಯ ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವದ ಬಗ್ಗೆ ಮಾತನಾಡಿದರು. ಉಪ ಪ್ರಾಂಶುಪಾಲರಾದ  ಮಾಲತಿ ಎ, ಸಂಚಾಲಕರಾದ  ದಯಾನಂದ, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Post a Comment

0 Comments

ಜಾಹೀರಾತು

Responsive Advertisement