Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಹೊಸಂಗಡಿಯಲ್ಲಿ ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಬೀಭತ್ಸ ಕೊಲೆ ಪ್ರಕರಣ ಬಳಿಕ ನಾಪತ್ತೆಯಾದ ಇಬ್ಬರಿಗಾಗಿ ತೀವ್ರ ಶೋಧ

ಉಪ್ಪಳ : ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿಯಲ್ಲಿ ಯುವಕನೊಬ್ಬನನ್ನು ಶನಿವಾರ ರಾತ್ರಿ ಕೊಲೆ ಮಾಡಿರುವ ಘಟನೆ  ನಡೆದಿದ್ದು ಕೃತ್ಯ ಎಸಗಿದ ಆರೋಪಿಗಳಿಗಾಗಿ ಕಾರ್ಯಾಚರಣೆ ತೀವ್ರಗೊಂಡಿದೆ. ಕರ್ನಾಟಕ ನಿವಾಸಿಯಾದ ರಮೇಶ್ (42) ಕೊಲೆಯಾದವರು. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಹೊಸಂಗಡಿಯ ಹಳೆಯ ಮನೆಯೊಂದರಲ್ಲಿ ತಲೆಗೆ ಗಂಭೀರ ಗಾಯವಾಗಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿರುವ ಇಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕೊಲೆಯ ಹಿಂದೆ ಅವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಹೊಸಂಗಡಿಗೆ ಆಗಮಿಸಿ ತನಿಖೆ ನಡೆಸುತ್ತಿದೆ.

Post a Comment

0 Comments

ಜಾಹೀರಾತು

Responsive Advertisement