ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಹಿಂದಿ ಸಂಘದ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ‘ಹಿಂದಿ ದಿವಸ-2026’ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಮಕೃಷ್ಣ ಕೆ.ಎಸ್. ಮಾತನಾಡಿ, "ಭಾಷೆಗಳು ಸಂವಹನದ ಮಾಧ್ಯಮವಾಗಿದ್ದು, ಸಮಾಜದ ಅವಿಭಾಜ್ಯ ಅಂಗಗಳಾಗಿವೆ. ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳ ಜ್ಞಾನವು ವ್ಯಕ್ತಿಯ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಚಿಂತನಾ ಶಕ್ತಿಯನ್ನು ವೃದ್ಧಿಸಿ, ವಿವಿಧ ಸಂಸ್ಕೃತಿಗಳ ಪರಿಚಯಕ್ಕೆ ಅವಕಾಶ ಕಲ್ಪಿಸುತ್ತದೆ" ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, "ಪ್ರತಿಯೊಂದು ಭಾಷೆಯ ಕಲಿಕೆಯೂ ಹೊಸ ಸಂಸ್ಕೃತಿ ಹಾಗೂ ಸಮಾಜದ ಪರಿಚಯದೊಂದಿಗೆ ಜ್ಞಾನವನ್ನು ವೃದ್ಧಿಸುತ್ತದೆ" ಎಂದು ತಿಳಿಸಿದರು.
ಹಿಂದಿ ದಿವಸದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಹಿಂದಿ ಸಂಘದ ನಿರ್ದೇಶಕಿ ಡಾ. ಬಿ. ಲತಾ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

0 Comments