ಕಲಬುರಗಿ : ಆಟೋ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಶರಣಮ್ಮ (30) ಹಾಗೂ ಅವರ ಮೂರು ತಿಂಗಳ ಮಗು ಎಂದು ಗುರುತಿಸಲಾಗಿದೆ. ವಾಡಿ ಪಟ್ಟಣದತ್ತ ತೆರಳುತ್ತಿದ್ದ ವೇಳೆ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಶರಣಮ್ಮ ಅವರ ಅತ್ತೆ ಸಾಬಮ್ಮ ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0 Comments