Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಹೊಸಂಗಡಿಯ ಲಾಡ್ಜ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಾಸರಗೋಡು : ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿಯ ಲಾಡ್ಜ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ವಯನಾಡ್ ಮೂಲದ ಬಿಜು ಸಿ.ಜೆ. ಅಲಿಯಾಸ್ ಆಂಟೋನಿ ಬಿಜು (44) ಬಂಧಿತ ಆರೋಪಿ. ಜಿಲ್ಲಾ ಪೊಲೀಸ್ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಾಚರಿಸಿದ ವಿಶೇಷ ತಂಡದ ಸಹಾಯದಿಂದ ಮಂಜೇಶ್ವರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

2016ರಲ್ಲಿ ನಡೆದಿದ್ದ ಪ್ರಕರಣದಲ್ಲಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ರಿಮಾಂಡ್ ಅವಧಿ ಮುಗಿದ ನಂತರ ಬಿಡುಗಡೆಯಾಗಿದ್ದು, ನಂತರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದನು. ಸುಮಾರು ಒಂದು ದಶಕದ ಬಳಿಕ ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement