Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪೆರ್ಲದ ನಾಲಂದ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಪೆರ್ಲ : ನಾಲಂದ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು  ಆಚರಿಸಲಾಯಿತು.

 ಎನ್ ಎಸ್ ಎಸ್ ಯೋಜನಾಧಿಕಾರಿ ವರ್ಷಿತ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿಶಾ ಎ. ಅವರು ಸಾಕ್ಷರತೆಯ ಮಹತ್ವ, ಶಿಕ್ಷಣದ ಅಗತ್ಯತೆ ಹಾಗೂ ಸಮಾಜದ ಪ್ರಗತಿಯಲ್ಲಿ ಸಾಕ್ಷರತೆಯ ಪಾತ್ರದ ಕುರಿತು ಮಾತನಾಡಿದರು. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯುವುದರ ಜೊತೆಗೆ, ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಅವರು ತಿಳಿಸಿದರು. ಎನ್ ಎಸ್ ಎಸ್ ಸ್ವಯಂಸೇವಕಿ ಶ್ರದ್ಧಾ ಸ್ವಾಗತಿಸಿ, ತುಳಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್ ಎಸ್ ಎಸ್ ಸ್ವಯಂಸೇವಕ ಅನೀಶ್ ವಂದನಾರ್ಪಣೆ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮವು ಸಾಕ್ಷರತೆಯ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

Post a Comment

0 Comments

ಜಾಹೀರಾತು

Responsive Advertisement