Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಸದಸ್ಯತ್ವ ಪ್ರದಾನ ಸಮಾರಂಭ

ಮೀಂಜ : ಮೀಯಪದವಿನ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯಲ್ಲಿ ನೂತನವಾಗಿ ಆಯ್ಕೆಯಾದ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ಅಧಿಕೃತವಾಗಿ ಸ್ಕಾರ್ಫ್ ತೊಡಿಸುವ ಕಾರ್ಯಕ್ರಮವು ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು.

ಕಾರ್ಯಕ್ರಮಕ್ಕೆ ಜೂನಿಯರ್ ರೆಡ್ ಕ್ರಾಸ್‌ನ ಧ್ಯೇಯ ಗೀತೆಯೊಂದಿಗೆ ಚಾಲನೆ ದೊರೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗೌತಮ್ ಅವರು ನೂತನ ವಿದ್ಯಾರ್ಥಿಗಳಿಗೆ ಸ್ಕಾರ್ಫ್ ಧಾರಣೆ ಮಾಡಿ ಘಟಕಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮಾತನಾಡಿದ ಅವರು, "ವಿದ್ಯಾರ್ಥಿ ಜೀವನದಲ್ಲೇ ಸೇವಾ ಮನೋಭಾವ, ಮಾನವೀಯ ಮೌಲ್ಯಗಳು ಮತ್ತು ಆರೋಗ್ಯದ ಜಾಗೃತಿ ಬೆಳೆಸಿಕೊಳ್ಳಲು ರೆಡ್ ಕ್ರಾಸ್ ಉತ್ತಮ ವೇದಿಕೆ" ಎಂದು ಆಶಯ ವ್ಯಕ್ತಪಡಿಸಿದರು.

ಶಾಲಾ ಪ್ರಬಂಧಕರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾಲಿಯೇಟಿವ್ ನರ್ಸ್ ಶೋಭಾ ಮತ್ತು ಕೃಷ್ಣಪ್ರಿಯ ಅವರು ವಿದ್ಯಾರ್ಥಿಗಳಿಗೆ ಆರೋಗ್ಯ ಸಂರಕ್ಷಣೆ, ಪ್ರಥಮ ಚಿಕಿತ್ಸೆ ಹಾಗೂ ಸಮಾಜ ಸೇವೆಯ ಮಹತ್ವ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮೃದುಲ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಯಾಡೆಟ್ ಚಿಂತನ ಸ್ವಾಗತಿಸಿ, ಕ್ಯಾಡೆಟ್ ಫಾತಿಮಾ ನೈಮ ಧನ್ಯವಾದ ಸಮರ್ಪಿಸಿದರು. ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಹಾಗೂ ಅಧ್ಯಾಪಕರಾದ ಲಕ್ಷ್ಮೀಶ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ನೂತನ ಕ್ಯಾಡೆಟ್‌ಗಳು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement