ಕುಂಬಳೆ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಕೆ. ಸುರೇಂದ್ರನ್ ಅವರು ಮಂಗಳವಾರ ಕುಂಬಳೆ ಮಂಡಲಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ ಬಿ. ವಿಕ್ರಮ ಪೈ ಹಾಗೂ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಡಲದ ಕಾರ್ಯಕರ್ತರ ವತಿಯಿಂದ ಕೆ. ಸುರೇಂದ್ರನ್ ಅವರಿಗೆ ಶಾಲು ಹೊದಿಸಿ ಗೌರವಿಸಲಾಯಿತು.
ಬಳಿಕ ಕೆ. ಸುರೇಂದ್ರನ್ ಅವರು ಕಣಿಪುರ ಶ್ರೀ ಗೋಪಾಲಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಪ್ರಸಾದ ಸ್ವೀಕರಿಸಿ ಪ್ರಾರ್ಥನೆ ಸಲ್ಲಿಸಿದರು.

0 Comments