Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮೀಯಪದವು ಶಾಲೆಯಲ್ಲಿ 'ಕನಕಾಭಿಯಾನ' ಕಾರ್ಯಕ್ರಮ ಸಂಪನ್ನ

ಮೀಯಪದವು : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ‘ಕನಕ ಚಿಂತನೆ ಪ್ರಸಾರ ಮಾಲಿಕೆ’ಯ ಅಂಗವಾಗಿ ಆಯೋಜಿಸಲಾಗಿದ್ದ ‘ಕನಕಾಭಿಯಾನ’ ಕಾರ್ಯಕ್ರಮವು ಮೀಯಪದವಿನಲ್ಲಿ ಯಶಸ್ವಿಯಾಗಿ ನಡೆಯಿತು.

ಮೀಯಪದವಿನ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯ ಕೇಶವಾಮೃತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ 'ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಉಪನ್ಯಾಸ ಹಾಗೂ ರಸಪ್ರಶ್ನೆ' ಕಾರ್ಯಕ್ರಮ ನಡೆಯಿತು.  ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯ ಪ್ರಬಂಧಕರಾದ  ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ಉದ್ಘಾಟಿಸಿದರು. ಉನ್ನತ ಪ್ರೌಢಶಾಲೆಯ ಪ್ರಾಂಶುಪಾಲರಾದ  ರಮೇಶ ಕೆ.ಎನ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕರಾದ ಡಾ. ಧನಂಜಯ ಕುಂಬ್ಳೆ ಅವರು ಕಾರ್ಯಕ್ರಮದ ಕುರಿತು ಆಶಯ ನುಡಿಗಳನ್ನಾಡಿದರು. ಮಂಗಳೂರು ವಿವಿಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ಸಾಯಿಸುಮಾ ನಾವಡ, ಕಾರಿಂಜ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕನಕದಾಸರ ಜೀವನ ಮೌಲ್ಯಗಳು ಹಾಗೂ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಶ್ರೀ ವಿದ್ಯಾವರ್ಧಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ಮೃದುಲಾ ಕೆ.ಯಂ. ಅವರು ಉಪಸ್ಥಿತರಿದ್ದರು. ಅಧ್ಯಾಪಕರಾದ   ಪ್ರಭಾಕರ ಹಾಗೂ ಬ್ರಿಜೇಶ್ ಕನಕದಾಸರ ಕೀರ್ತನೆಯನ್ನು  ಸುಶ್ರಾವ್ಯವಾಗಿ ಹಾಡಿದರು

ಉನ್ನತ ಪ್ರೌಢಶಾಲೆಯ ಅಧ್ಯಾಪಕರಾದ ಹರೀಶ ಜಿ. ಅವರು ಸರ್ವರನ್ನೂ ಸ್ವಾಗತಿಸಿ ಪ್ರೌಢಶಾಲೆಯ ಅಧ್ಯಾಪಿಕೆ  ಸುಧಾ ಕೆ.ಯಂ. ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕ ರಾಜಾರಾಮ ಪಿ. ಧನ್ಯವಾದ ಸಮರ್ಪಿಸಿದರು. ಸಾಹಿತಿ  ರಾಜಶ್ರೀ ಟಿ. ರೈ ಅವರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

ಮಂಗಳೂರು ವಿವಿಯ ಕುಲಸಚಿವರಾದ  ಸಂತೋಷ್ ಬಿ. ಜಗಲಸಾರ (ಕೆ.ಎ.ಎಸ್) ಮತ್ತು ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಮೂಡಿಬಂದಿತು. ಈ ಉಪಯುಕ್ತ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು.

Post a Comment

0 Comments

ಜಾಹೀರಾತು

Responsive Advertisement