Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಯರ್‌ಕಟ್ಟೆ ಶಾಲೆಯ ವಾರ್ಷಿಕ ಕ್ರೀಡಾಕೂಟ ಸಂಪನ್ನ

ಪೈವಳಿಕೆ : ಸರಕಾರಿ ಉನ್ನತ ಪ್ರೌಢ ಶಾಲೆ  ಪೈವಳಿಕೆ, ಕಾಯರ್‌ಕಟ್ಟೆಯಲ್ಲಿ ಶಾಲೆಯ ವಾರ್ಷಿಕ ಎರಡು ದಿನಗಳ ಕ್ರೀಡಾಕೂಟ ‘ಅಥ್ಲೆಟಿಕಾ–26’ ಸಂಪನ್ನಗೊಂಡಿತು.

ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ  ಹರ್ಷಾದ್ ವರ್ಕಾಡಿ ದೀಪಶಿಕಾ ಪ್ರಜ್ವಲನೆಗೊಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಸಹನೆ ಹಾಗೂ ಒಗ್ಗಟ್ಟಿನ ಮನೋಭಾವವನ್ನು ಬೆಳೆಸುತ್ತದೆ. ಗೆಲುವು–ಸೋಲಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವ ಮನೋಭಾವವೇ ವಿದ್ಯಾರ್ಥಿಗಳ ನಿಜವಾದ ಗೆಲುವು” ಎಂದು ಅಭಿಪ್ರಾಯಪಟ್ಟರು.

ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷರಾದ  ಆದಂ ಬಳ್ಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ  ಅಬ್ದುಲ್ ಖಾದರ್ ಹಾಜಿ ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಎಂ. ಬಳ್ಳಾಲ್ ಉಪಸ್ಥಿತರಿದ್ದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. 

ಶಾಲಾ ಪ್ರಾಂಶುಪಾಲರಾದ  ಡೊಮಿನಿಕ್ ಅಗಸ್ಟಿನ್, ಪಿಟಿಎ ಉಪಾಧ್ಯಕ್ಷ ಸದಸ್ಯ  ಖಲೀಲ್ ಚಿಪ್ಪಾರ್, ಶಾಲಾ ನಿರ್ವಹಣಾ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಪೆರ್ವೋಡಿ ಹಾಗೂ ಅಧ್ಯಾಪಕಿ ಬೇಬಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ  ಭಾಗ್ಯಲಕ್ಷ್ಮಿ ಸ್ವಾಗತಿಸಿ, ಅಧ್ಯಾಪಕ  ಪೃಥ್ವಿರಾಜ್ ಧನ್ಯವಾದ ಸಮರ್ಪಿಸಿದರು. ಅಶ್ರಫ್ ಮರ್ತ್ಯ ನಿರೂಪಿಸಿದರು.

ಶಾಲೆಯ ವಿದ್ಯಾರ್ಥಿಗಳನ್ನು ವಿವಿಧ ಸ್ಪರ್ಧೆಗಳಿಗೆ ತರಬೇತಿಗೊಳಿಸಿದ ನಿವೃತ್ತ ದೈಹಿಕ ಶಿಕ್ಷಕರಾದ ಕೆ ಎಂ ಬಲ್ಲಾಲ್ ಅವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನವು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.

Post a Comment

0 Comments

ಜಾಹೀರಾತು

Responsive Advertisement