ಕುಂಬ್ಡಾಜೆ: ಪೊಡಿಪ್ಪಳ್ಳ ಶ್ರೀ ಚೀರುಂಬಾ ಭಗವತಿ ಕ್ಷೇತ್ರದ ನವೀಕರಣದ ಅಂಗವಾಗಿ ಸಮುದಾಯ ಸದಸ್ಯರ ಮಹಾ ಕುಟುಂಬ ಸಂಗಮ ನಾಳೆ (ಸೆ.27) ಕ್ಷೇತ್ರದ ಸಭಾಭವನದಲ್ಲಿ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಬಳಿಕ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಮಧ್ಯಾಹ್ನ ಭೋಜನ ವ್ಯವಸ್ಥೆ ಇರಲಿದೆ. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಮುದಾಯದ ಸದಸ್ಯರು ಹಾಗೂ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ತಿಳಿಸಿದ್ದಾರೆ.

0 Comments