ಪುತ್ತೂರು : ಕೌಟುಂಬಿಕ ಕಲಹದ ದೂರು ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮನೆಗೆ ತೆರಳಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆಯೇ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆಘಾತಕಾರಿ ಘಟನೆ ತಾಲೂಕಿನ ಪಡೂರಿನಲ್ಲಿ ಶುಕ್ರವಾರ ನಡೆದಿದೆ.ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರು ಪೊಲೀಸರನ್ನು ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪಡ್ನೂರು ಗ್ರಾಮದಲ್ಲಿ ಕೌಟುಂಬಿಕ ಕಲಹ ನಡೆಯುತ್ತಿರುವ ಕುರಿತು ಪೊಲೀಸ್ ಠಾಣೆಗೆ ದೂರು ಬಂದಿತ್ತು. ಈ ದೂರಿನ ಮೇರೆಗೆ ಸ್ಥಳ ಪರಿಶೀಲನೆ ಹಾಗೂ ವಿಚಾರಣೆಗಾಗಿ ಇಬ್ಬರು ಪೊಲೀಸರು ರಾತ್ರಿ ವೇಳೆ ಪಡೂರಿನ ಸಂಬಂಧಪಟ್ಟ ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಪೊಲೀಸರೊಂದಿಗೆ ಗಲಾಟೆ ತೆಗೆದು, ದಿಢೀರ್ ದಾಳಿ ನಡೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪೊಲೀಸರ ಕರ್ತವ್ಯಕ್ಕೆ ತಡೆಯೊಡ್ಡಿ, ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳೀಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

0 Comments