Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮತದಾರರ ಪಟ್ಟಿಯಲ್ಲಿ ಹೆಸರು ವ್ಯತ್ಯಾಸ: ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂಗೆ ಎಸ್‌ಐಆರ್ ನೋಟಿಸ್

ಮಂಗಳೂರು : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ದಕ್ಷಿಣ ಕನ್ನಡದ ನಿವೃತ್ತ ಜಿಲ್ಲಾಧಿಕಾರಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರಾಗಿರುವ ಇಬ್ರಾಹಿಂ ಅವರ ಹೆಸರಿನಲ್ಲಿ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಸೆಪ್ಟೆಂಬರ್ 29ರಂದು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಹೆಸರಿನ ವ್ಯತ್ಯಾಸವನ್ನು ಸಾಬೀತುಪಡಿಸುವಂತೆ ಸೂಚಿಸಲಾಗಿದೆ.

ಹಿಂದಿನ ಮತದಾರರ ಪಟ್ಟಿಯಲ್ಲಿರುವ ಹೆಸರು ಮತ್ತು ಪ್ರಸ್ತುತ ಪಟ್ಟಿಯಲ್ಲಿರುವ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಈ ನೋಟಿಸ್ ನೀಡಲಾಗಿದೆ. ನಿಗದಿತ ದಿನಾಂಕದಂದು ದಾಖಲೆಗಳೊಂದಿಗೆ ಹಾಜರಾಗಲು ಅಥವಾ ಸ್ಥಳೀಯ ಬಿಎಲ್‌ಒ ಅವರನ್ನು ಸಂಪರ್ಕಿಸಲು ಸೂಚಿಸಲಾಗಿದ್ದು, ನೋಟಿಸ್‌ನಲ್ಲಿ ಸಂಬಂಧಪಟ್ಟ ಅಧಿಕಾರಿಯ ಸಂಪರ್ಕ ಸಂಖ್ಯೆಯನ್ನೂ ನೀಡಲಾಗಿದೆ.

ತಾವು ನಿವೃತ್ತ ಅಧಿಕಾರಿಯಾಗಿದ್ದು, ಈ ಹಿಂದೆ ಚುನಾವಣಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರೂ ಎಸ್‌ಐಆರ್ ನೋಟಿಸ್ ನೀಡಿರುವುದಕ್ಕೆ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸ್‌ಐಆರ್ ನೋಟಿಸ್‌ನಲ್ಲಿರುವ ಕೆಲವು ಕಠಿಣ ಸೂಚನೆಗಳು ಹಾಗೂ ತಪ್ಪು ಮಾಹಿತಿ ನೀಡಿದರೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂಬ ಎಚ್ಚರಿಕೆಗಳು ಸಾಮಾನ್ಯ ಜನರಲ್ಲಿ ಅನಗತ್ಯ ಆತಂಕ ಮೂಡಿಸಬಹುದು ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಮತದಾರರ ಪಟ್ಟಿಯಲ್ಲಿನ ಹೆಸರಿನ ವ್ಯತ್ಯಾಸದ ಕಾರಣಕ್ಕೆ ಎಸ್‌ಐಆರ್ ನೋಟಿಸ್ ನೀಡಲಾಗಿತ್ತು. ಈ ವಿಚಾರ ಸುದ್ದಿಯಾಗುತ್ತಿದ್ದಂತೆ ಆ ನೋಟಿಸ್ ಹಿಂಪಡೆಯಲಾಗಿತ್ತು.

Post a Comment

0 Comments

ಜಾಹೀರಾತು

Responsive Advertisement