Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸೆ.10ರಂದು ಮಕ್ಕಳ ಕ್ಯಾನ್ಸರ್ ಕುರಿತು ‘ಶೌರ್ಯ’ ಮಾಹಿತಿ ಶಿಬಿರ

ಮಂಗಳೂರು : ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಡಿ ಹಾಗೂ ತಪಸ್ಯ ಫೌಂಡೇಶನ್‌ ವತಿಯಿಂದ ವಿವಿಧ ವೈದ್ಯಕೀಯ ಸಂಸ್ಥೆಗಳ ಸಹಯೋಗದಲ್ಲಿ ಮಕ್ಕಳ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ‘ಶೌರ್ಯ’ ಮಾಹಿತಿ ಶಿಬಿರ ಸೆ.10ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ತಪಸ್ಯ ಫೌಂಡೇಶನ್‌ನ ವ್ಯವಸ್ಥಾಪನಾ ಟ್ರಸ್ಟಿ ಹಾಗೂ ಲಯನ್ಸ್ ಜಿಲ್ಲೆ 317ಡಿ ಮುಖ್ಯ ಸಂಯೋಜಕಿ ಲಯನ್ ಸಬಿತಾ ರಾಮನಾಥ್ ಶೆಟ್ಟಿ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಕ್ಯಾನ್ಸರ್‌ನ ಆರಂಭಿಕ ಪತ್ತೆ, ಚಿಕಿತ್ಸೆ ಹಾಗೂ ಜಾಗೃತಿ ಕುರಿತು ಮಾಹಿತಿ ನೀಡುವುದರ ಜೊತೆಗೆ ಬಡ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಧನಸಹಾಯ ನೀಡಲಾಗುವುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವೇದವ್ಯಾಸ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವೈದ್ಯರಾದ ಡಾ. ಹರ್ಷ ಪ್ರಸಾದ್ ಎಲ್., ಡಾ. ಚಂದನ ಪೈ ಹಾಗೂ ಡಾ. ಅನುಷಾ ಹೆಗಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಸ್ಟರ್ ಅಸ್ಮಿತ್ ಅವರ ವಿಶೇಷ ಗಾಯನ ಹಾಗೂ ನಂದಗೋಕುಲ ತಂಡದ ನೃತ್ಯ ಪ್ರದರ್ಶನ ನಡೆಯಲಿದೆ. ಜುಲೇಖಾ ಏನಪಯ ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ  ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವೂ ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಜಿಲ್ಲೆ 317ಡಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಕೆ. ಶೆಟ್ಟಿ,  ಸಂಘದ ಪ್ರಮುಖರಾದ   ವಿಜಯ ವಿಷ್ಣು ಮಯ್ಯ, ಪ್ರಶಾಂತ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement