Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನಾಲಂದ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಪೆರ್ಲ: ನಾಲಂದ ಕಾಲೇಜು  ನ್ ಸ್ ಸ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಪ್ರಾಂಶುಪಾಲರಾದ ಸುನಿತ್ ಕುಮಾರ್ ಡಿ. ಅವರನ್ನು ಅವರ ನಿವಾಸದಲ್ಲಿ ಗೌರವಿಸಲಾಯಿತು. ಇವರು ಕಾಟುಕುಕ್ಕೆ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿ ನಂತರ ನಾಲಂದ ಕಾಲೇಜಿನಲ್ಲಿ ಕೆಲಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಶಿಕ್ಷಕರು ಕೇವಲ ಪಠ್ಯಜ್ಞಾನವನ್ನು ನೀಡುವವರಲ್ಲ; ವಿದ್ಯಾರ್ಥಿಗಳಲ್ಲಿ ಉತ್ತಮ ಚಿಂತನೆ, ಶಿಸ್ತು, ಮೌಲ್ಯಗಳು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಾರ್ಗದರ್ಶಕರಾಗಿದ್ದಾರೆ ಎಂದು ಅವರು ವಿವರಿಸಿದರು.

ಶಿಕ್ಷಕರ ಸೇವೆ ಸಮಾಜದ ಭವಿಷ್ಯ ನಿರ್ಮಾಣಕ್ಕೆ ಬುನಾದಿಯಾಗಿದ್ದು, ಅವರ ತ್ಯಾಗ, ಪರಿಶ್ರಮ ಮತ್ತು ಮಾರ್ಗದರ್ಶನವನ್ನು ಸದಾ ಗೌರವಿಸಬೇಕು ಎಂದು ನಾಲಂದ ಕಾಲೇಜಿನ ಉಪಪ್ರಾಂಶುಪಾಲರಾದ ಶಂಕರ ಖಂಡಿಗೆ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಸುನಿತ್ ಕುಮಾರ್ ಡಿ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಲಯಾಳಂ ಉಪನ್ಯಾಸಕಿ  ವಿನೀಶಾ, ಎನ್ ಎಸ್ ಎಸ್ ಯೋಜನಾಧಿಕಾರಿ ವರ್ಷಿತ್ ಕೆ ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮವು ಶಿಕ್ಷಕರಿಗೆ ಗೌರವ ಸಲ್ಲಿಸುವುದರ ಜೊತೆಗೆ ಅವರ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವಲ್ಲಿ ಅರ್ಥಪೂರ್ಣವಾಗಿತ್ತು. ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

Post a Comment

0 Comments

ಜಾಹೀರಾತು

Responsive Advertisement