ಪೆರ್ಲ : ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡೆಗಳ ರೋಮಾಂಚನ, ಜಾನಪದ ಸೊಗಡು ಹಾಗೂ ಸಾಂಸ್ಕೃತಿಕ ಸಂಭ್ರಮಕ್ಕೆ ಉಕ್ಕಿನಡ್ಕದ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ಗದ್ದೆ ಸಾಕ್ಷಿಯಾಯಿತು . ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮಂಜೇಶ್ವರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ವೈಶಾಲಿ ನವಜೀವನ ಸಮಿತಿ ಪೆರ್ಲ ವಲಯ, ಶೌರ್ಯ ಘಟಕ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಜ್ಞಾನವಿಕಾಸ ಕೇಂದ್ರ ಪೆರ್ಲ ವಲಯದ ಸಹಯೋಗದಲ್ಲಿ ಆಯೋಜಿಸಿದ್ದ ‘ನವಜೀವನೋತ್ಸವ–ಕೆಸರಿನಲ್ಲಿ ಜಾನಪದ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಭ್ರಮ’ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾವತಿ ಟೀಚರ್ ಉದ್ಘಾಟಿಸಿದರು. ಉದ್ಯಮಿ ಉದಯ ಚೆಟ್ಟಿಯಾರ್ ಬಜಕೂಡ್ಲು ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಪೆರ್ಲ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಪಿ. ಶೇಣಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಎಣ್ಮಕಜೆ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಆಯಿಷಾ ಎ.ಎ., ಮಂಜೇಶ್ವರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ ಆಳ್ವ, ಪೆರ್ಲ ವಲಯ ಜನಜಾಗೃತಿ ವೇದಿಕೆ ಸದಸ್ಯ ಸತೀಶ್ ಚಂದ್ರ ಭಂಡಾರಿ ಕೋಳಾರು, ಮಂಜೇಶ್ವರ ತಾಲೂಕು ಶೌರ್ಯ ವಿಪತ್ತು ಘಟಕದ ಮಾಸ್ಟರ್ ಪ್ರಸಾದ್ ಮಣಿಯಂಪಾರೆ, ವೈಶಾಲಿ ನವಜೀವನ ಸಮಿತಿ ಪೆರ್ಲ ವಲಯ ಕಾರ್ಯದರ್ಶಿ ರಘು ಪೂಜಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಲಾ ಇಬ್ಬರು ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯವಾಗುವ ಸುಜ್ಞಾನ ನಿಧಿ ಶಿಷ್ಯ ವೇತನ ಹಾಗೂ ವಾತ್ಸಲ್ಯ ವಿದ್ಯಾನಿಧಿ ವಿತರಿಸಲಾಯಿತು.
ವೈಶಾಲಿ ನವಜೀವನ ಸಮಿತಿ ಅಧ್ಯಕ್ಷ ಜಗದೀಶ ಪರ್ತಾಜೆ ಅವರನ್ನು ಅಭಿನಂದಿಸಲಾಯಿತು. ದೇವಣ್ಣ ನಾಯ್ಕ ವರದಿ ಮಂಡಿಸಿದರು. ಸೇವಾ ಪ್ರತಿನಿಧಿಗಳು ಪ್ರಾರ್ಥನೆ ಹಾಡಿದರು. ಜನಜಾಗೃತಿ ವೇದಿಕೆ ಪೆರ್ಲ ವಲಯ ಸದಸ್ಯ ಪ್ರಸಾದ್ ಟಿ.ಸ್ವಾಗತಿಸಿ, ಸೇವಾ ಪ್ರತಿನಿಧಿ ಚಂದ್ರಾವತಿ ವಂದಿಸಿದರು. ಪತ್ರಕರ್ತ ಜಯ ಮಣಿಯಂಪಾರೆ ನಿರೂಪಿಸಿದರು.
ಬಳಿಕ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.



0 Comments