ಮಂಗಳೂರು : ಅಷ್ಟಮಿ ಪ್ರಯುಕ್ತ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮದ ವೇಳೆ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.
ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶ್ರೀನಾಥ್ ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎನ್ನಲಾಗಿದೆ. ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
.jpeg)
0 Comments