ಬದಿಯಡ್ಕ : ಯುವಕನೊಬ್ಬ ಮನೆಯ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಮೃತಪಟ್ಟ ಘಟನೆ ಕನ್ಯಪ್ಪಾಡಿ ಸಮೀಪದ ಪಟ್ಟಾಜೆಯಲ್ಲಿ ನಡೆದಿದೆ. ಪಟ್ಟಾಜೆ ನಿವಾಸಿ ರಂಜಿತ್ (26) ಮೃತಪಟ್ಟವರು. ನಿನ್ನೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8.30ರೊಳಗೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಮನೆಯವರು ಬೆಳಗ್ಗೆ ಸಂಬಂಧಿಕರ ಮನೆಗೆ ತೆರಳಿದ್ದರು. ರಾತ್ರಿ 8.30ರ ಸುಮಾರಿಗೆ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಹಲವು ಬಾರಿ ಕರೆದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತ್ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದರು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಬದಿಯಡ್ಕ ಪೊಲೀಸರು ಇನ್‌ಕ್ವೆಸ್ಟ್ ನಡೆಸಿದ ಬಳಿಕ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಚನಿಯಪ್ಪ ನಾಯಕ್ ಮತ್ತು ಶ್ಯಾಮಲ ದಂಪತಿಯ ಪುತ್ರನಾದ ರಂಜಿತ್ ಅವಿವಾಹಿತರಾಗಿದ್ದರು. ಇವರು ಸಹೋದರ ಸಹೋದರಿಯರಾದ ಸುಜಿತ್ ಹಾಗೂ ಸುಪ್ರೀತರನ್ನು ಅಗಲಿದ್ದಾರೆ.

0 Comments