ಕಾರ್ಕಳ: ಸಮೀಪದ ಸಾಣೂರಿನಲ್ಲಿ ಮಾಜಿ ಸಚಿವ ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಢಿಕ್ಕ ಹೊಡೆದು ಅಪಘಾತ ಸಂಭವಿಸಿದೆ. ರಮಾನಾಥ್ ರೈ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನ ಚಾಲಕ ಹಾಗೂ ಅವರ ಆಪ್ತ ಸಹಾಯಕ (ಪಿಎ) ಗಾಯಗೊಂಡಿದ್ದಾರೆ. ಕಾರ್ಕಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಎದುರಿನಿಂದ ಬರುತ್ತಿದ್ದ ರಮಾನಾಥ್ ರೈ ಅವರಿದ್ದ ಕಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಜ್ಜುಗುಂದಿದ್ದು, ಚಾಲಕ ಹಾಗೂ ಪಿಎಗೆ ಪೆಟ್ಟಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿದ್ದಾರೆ. ಪ್ರಸ್ತುತ ಗಾಯಾಳುಗಳನ್ನು ಕಾರ್ಕಳದ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

0 Comments