Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಆತ್ಮಹತ್ಯೆ ಎಂದು ಬಿಂಬಿಸಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಕೊಲೆ; ಇಬ್ಬರ ಬಂಧನ

ತೆಲಂಗಾಣ : ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಭಾವಿಸಲಾಗಿದ್ದ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ತಂದ್ರಾ ಅಕ್ಷಿತಾರಾಣಿ ಅವರ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಆಕೆಗೆ ಬಲವಂತವಾಗಿ ಕೀಟನಾಶಕ ಕುಡಿಸಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಿಂಗರೇಣಿ ಕಾಲರೀಸ್ ಪಾಲಿಟೆಕ್ನಿಕ್ ಕಾಲೇಜಿನ ಹೊರಗುತ್ತಿಗೆ ಉಪನ್ಯಾಸಕ ನವೀನ್ ಕುಮಾರ್ (38) ಹಾಗೂ ಸಿಂಗರೇಣಿ ಉದ್ಯೋಗಿ ರವಿ ಕುಮಾರ್ (35) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೆ. 12ರಂದು ಮನೆಗೆ ತೆರಳುತ್ತಿದ್ದ ಅಕ್ಷಿತಾರಾಣಿಯನ್ನು ಎಫ್‌ಸಿಐ ಕ್ರಾಸ್‌ರೋಡ್ಸ್ ಬಳಿ ಕಾರಿನಲ್ಲಿ ಅಡ್ಡಗಟ್ಟಿದ ನವೀನ್ ಕುಮಾರ್ ಬಲವಂತವಾಗಿ ಕರೆದೊಯ್ದು, ರವಿ ಕುಮಾರ್ ವಿರುದ್ಧ ಆರೋಪ ಮಾಡುವಂತೆ ಡೆತ್‌ನೋಟ್ ಬರೆಯಲು ಒತ್ತಾಯಿಸಿ ಕೀಟನಾಶಕ ಕುಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಮರುದಿನ ಮೃತಪಟ್ಟಿದ್ದರು.

ಆರಂಭದಲ್ಲಿ ಆತ್ಮಹತ್ಯೆ ಎಂದು ಭಾವಿಸಲಾಗಿದ್ದ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳು, ಕರೆ ದಾಖಲೆಗಳು ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಸೆ. 20ರಂದು ಇಬ್ಬರನ್ನೂ ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Post a Comment

0 Comments

ಜಾಹೀರಾತು

Responsive Advertisement