Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ : ಪ್ರತಿಕೃತಿ ದಹನ

ಮಂಗಳೂರು : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಮಹಾವೀರ ವೃತ್ತದಿಂದ ಪ್ರಜಾಸೌಧದವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಲು ಮುಂದಾದರು.

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಎಸ್‌ಐಆರ್ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಮಾಡಿರುವ ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಜ್ಞಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Post a Comment

0 Comments

ಜಾಹೀರಾತು

Responsive Advertisement