Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮೀಯಪದವು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ಮೀಯಪದವು : ಯುವಜನರಲ್ಲಿ ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯಕರ ಸಮಾಜ ನಿರ್ಮಿಸುವ ಉದ್ದೇಶದಿಂದ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಾದಕವಸ್ತು ವಿರೋಧಿ ಜಾಗೃತಿ ತರಗತಿ ನಡೆಯಿತು.

‘ತೂಫಾನ್ ಕಮಾಂಡೋಸ್ – ಮಿಷನ್ ಅಗೇನ್ಸ್ಟ್ ಡ್ರಗ್ಸ್’ ಯೋಜನೆಯ ಅಂಗವಾಗಿ ಸೆ.23ರಂದು ಶಾಲಾ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಅರ್ಜುನ್ ಅರವಿಂದ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾದಕವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಕಾನೂನು ಕ್ರಮಗಳು ಹಾಗೂ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಮಾಹಿತಿ ನೀಡಿದರು.

‘ಆರೋಗ್ಯವಂತ ಯುವಜನತೆ – ಬಲಿಷ್ಠ ದೇಶ’ ಎಂಬ ಧ್ಯೇಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಿವಿಲ್ ಪೊಲೀಸ್ ಅಧಿಕಾರಿ ಸಂತೋಷ್ ಸಿ., ಶಾಲಾ ಅಧ್ಯಾಪಕರು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಅಧ್ಯಾಪಕ ರವಿಲೋಚನ ಸಿ.ಎಚ್. ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಸಂಚಾಲಕ ರಾಜೇಂದ್ರನ್ ಕೆ.ಪಿ. ಸ್ವಾಗತಿಸಿ, ವಂದಿಸಿದರು.

Post a Comment

0 Comments

ಜಾಹೀರಾತು

Responsive Advertisement