Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಎಂಆರ್‌ಪಿಎಲ್ ಸ್ಫೋಟ: ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸಿರಾಜ್ ಬಜ್ಪೆ ಆಗ್ರಹ

ಮಂಗಳೂರು : ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟದಿಂದ ಸುತ್ತಮುತ್ತಲಿನ ಪ್ರದೇಶಗಳ ಜನರಲ್ಲಿ ಆತಂಕ ಉಂಟಾಗಿದೆ. ಸ್ಫೋಟದ ತೀವ್ರತೆಯಿಂದ ಬಜ್ಪೆ ಸೇರಿದಂತೆ ಹಲವು ಪ್ರದೇಶಗಳಲ್ಲೂ ಜನರು ಭಯಭೀತರಾಗಿದ್ದಾರೆ ಎಂದು ಬಜ್ಪೆ ನಾಗರಿಕ ರಕ್ಷಣಾ ವೇದಿಕೆ ಅಧ್ಯಕ್ಷ ಸಿರಾಜ್ ಬಜ್ಪೆ ತಿಳಿಸಿದ್ದಾರೆ.

ಘಟನೆಯ ಸಂಪೂರ್ಣ ಸತ್ಯಾಸತ್ಯತೆಗಳನ್ನು ಜನರ ಮುಂದೆ ಬಹಿರಂಗಪಡಿಸಬೇಕು. ಕೈಗಾರಿಕಾ ಘಟಕಗಳಲ್ಲಿ ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜನರ ಸುರಕ್ಷತೆಯನ್ನು ಖಾತರಿಪಡಿಸುವಂತೆ ಒತ್ತಾಯಿಸಿ ಶೀಘ್ರದಲ್ಲೇ ಪ್ರತಿಭಟನೆ ನಡೆಸಲಾಗುವುದು ಎಂದು ಸಿರಾಜ್ ಬಜ್ಪೆ ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement