ರಾಂಚಿ : ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಶಾ ಸಿಂಗ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಜಮ್ಶೆಡ್‌ಪುರದ ಮೆರೈನ್ ಡ್ರೈವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು.
ಮಾಹಿತಿ ದೊರೆತ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ನಾಲ್ವರನ್ನು ಹೊರತೆಗೆದು ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ನಾಲ್ವರೂ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

0 Comments