Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಉನ್ನತ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ರೋಗಿ ಆಂಬುಲೆನ್ಸ್ ಪಲ್ಟಿಯಾಗಿ ಸಾವು

ಇಡುಕ್ಕಿ: ಕಟ್ಟಪ್ಪನದಲ್ಲಿ ಆಂಬುಲೆನ್ಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಅಣಕ್ಕರ ನಿವಾಸಿ ರಾಜನ್  ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ರಾಜನ್ ಅವರನ್ನು ಅಣಕ್ಕರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಟ್ಟಪ್ಪನದ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಪಾರಕ್ಕಡವು ಸಮೀಪ ಅಪಘಾತ ಸಂಭವಿಸಿದೆ.

ಆಂಬುಲೆನ್ಸ್‌ನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಅಪಘಾತದ ವೇಳೆ ರೋಗಿ ಹಾಗೂ ಚಾಲಕ ಸೇರಿದಂತೆ ನಾಲ್ವರು ಆಂಬುಲೆನ್ಸ್‌ನಲ್ಲಿದ್ದರು. ಘಟನೆಯಲ್ಲಿ ಚಾಲಕನಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Post a Comment

0 Comments

ಜಾಹೀರಾತು

Responsive Advertisement