Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

25 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ ಪೋಲಿಸ್ ಇನ್ಸ್‌ಪೆಕ್ಟರ್ 5 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಮಂಗಳೂರು : ಚೀಟಿಂಗ್ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಹಣವನ್ನು ಬಿಡುಗಡೆ ಮಾಡಲು 25 ಸಾವಿರ ರೂ. ಲಂಚ ನೀಡುವಂತೆ ಇನ್ಸ್‌ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 5 ಸಾವಿರ ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯ ಬಳಿಕ ಲೋಕಾಯುಕ್ತ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ. ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

Post a Comment

0 Comments

ಜಾಹೀರಾತು

Responsive Advertisement