Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪ್ರಸಾದದಲ್ಲಿ ಮಾದಕ ವಸ್ತು ನೀಡಿ ಮಹಿಳೆಯರ ಮೇಲೆ ದೌರ್ಜನ್ಯ; ನಕಲಿ ದೇವಮಾನವ ಬಂಧನ

ಸೇಲಂ : ಪೂಜೆಗಾಗಿ ಆಶ್ರಮಕ್ಕೆ ಬರುವ ಮಹಿಳೆಯರಿಗೆ ಪ್ರಸಾದದಲ್ಲಿ ಮಾದಕ ವಸ್ತು ನೀಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ದೃಶ್ಯಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಸೇಲಂ ಜಿಲ್ಲೆಯ ವಾಜಪ್ಪಾಡಿಯಲ್ಲಿ ‘ಶನೀಶ್ವರ’ ಹೆಸರಿನಲ್ಲಿ ಆಶ್ರಮ ನಡೆಸುತ್ತಿದ್ದ ವಿಜಯರಾಜ (50) ಬಂಧಿತ ಆರೋಪಿ. ಪೂಜೆ ನಡೆಸುವ ನೆಪದಲ್ಲಿ ಮಹಿಳೆಯರು ಹಾಗೂ ಬಾಲಕಿಯರನ್ನು ಆಶ್ರಮಕ್ಕೆ ಕರೆಸಿಕೊಂಡು ಪ್ರಸಾದದಲ್ಲಿ ಮಾದಕ ವಸ್ತು ಬೆರೆಸಿ ನೀಡುತ್ತಿದ್ದ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರ ಮೇಲೆ ದೌರ್ಜನ್ಯ ನಡೆಸಿ, ಗುಪ್ತ ಕ್ಯಾಮೆರಾಗಳ ಮೂಲಕ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೂ ಇದೇ ರೀತಿಯಲ್ಲಿ ದೌರ್ಜನ್ಯ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿ ಪ್ರಜ್ಞಾಹೀನಳಾಗದ ಕಾರಣ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ತೆರಳಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಆಶ್ರಮದಲ್ಲಿ ಪೊಲೀಸರು ಶೋಧ ನಡೆಸಿದ್ದು, ವಿಜಯರಾಜ ಬಳಸುತ್ತಿದ್ದ ಲ್ಯಾಪ್‌ಟಾಪ್ ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಪೂಜಾ ಕೊಠಡಿಯಲ್ಲಿ ಚಿತ್ರೀಕರಿಸಲಾಗಿದ್ದ ಸುಮಾರು 50 ಮಹಿಳೆಯರ ದೃಶ್ಯಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯಗಳಲ್ಲಿ ಶಾಲಾ ವಿದ್ಯಾರ್ಥಿನಿಯರೂ ಇದ್ದಾರೆ ಎನ್ನಲಾಗಿದೆ.

ಆರೋಪಿಯು ಕೆಲವು ದೃಶ್ಯಗಳನ್ನು ಡಾರ್ಕ್ ವೆಬ್ ಮೂಲಕ ಮಾರಾಟ ಮಾಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ವಿಜಯರಾಜ ಈ ಹಿಂದೆ ಗೃಹೋಪಯೋಗಿ ವಸ್ತುಗಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಬಳಿಕ ತಾನು ದೇವಮಾನವ ಎಂದು ಘೋಷಿಸಿಕೊಂಡು ಆಶ್ರಮ ನಡೆಸುತ್ತಿದ್ದ. ಬಂಧಿತ ವಿಜಯರಾಜನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement