Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನಾಳೆ (ಸೆ.26) ಮೀಯಪದವು ವಿದ್ಯಾವರ್ಧಕ ಶಾಲೆಯಲ್ಲಿ ರಾಮಕೃಷ್ಣರಾವ್ ಸಂಸ್ಮರಣೆ ಮತ್ತು ಸನ್ಮಾನ ಕಾರ್ಯಕ್ರಮ


 ಮಂಜೇಶ್ವರ : ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ ಹಾಗೂ ಶಿಕ್ಷಕರಾಗಿ ಮೀಂಜ ಪ್ರದೇಶದ ಶಿಕ್ಷಣ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ದಿ. ಎಂ. ರಾಮಕೃಷ್ಣರಾವ್ ಅವರ 21ನೇ ಪುಣ್ಯತಿಥಿ ಅಂಗವಾಗಿ ಸೆಪ್ಟೆಂಬರ್ 26ರಂದು ಸಂಸ್ಮರಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ರಂಗಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ನಾರಾಯಣ ದೇಲಂಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ. ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ. ಡಾ. ರಾಧಾಕೃಷ್ಣ ಎಸ್. ಐತಾಳ ಹಾಗೂ ಮೀಯಪದವು ಎಸ್‌ವಿವಿಹೆಚ್‌ಎಸ್‌ಎಸ್‌ನ ಸಂಚಾಲಕ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್), ಬೆಂಗಳೂರಿನ ನಿರ್ದೇಶಕ ಎಂ.ಜಿ. ಬಾಲಸುಬ್ರಹ್ಮಣ್ಯ ಹಾಗೂ ಕರ್ನಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಅಂಗ್ಲಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ ಎಲಿಯಾಣ ಅವರನ್ನು ಸನ್ಮಾನಿಸಲಾಗುವುದು.

ಮಧ್ಯಾಹ್ನ 2 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ‘ಗಾನ ಲಹರಿ’ ಕಾರ್ಯಕ್ರಮ ನಡೆಯಲಿದೆ.

Post a Comment

0 Comments

ಜಾಹೀರಾತು

Responsive Advertisement