Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸೆ.25ರಿಂದ ಸುರತ್ಕಲ್‌ನಲ್ಲಿ ಪ್ರಥಮ ಬಾರಿಗೆ ಕೃಷಿ ಹಾಗೂ ಆಹಾರ ಮೇಳ

ಮಂಗಳೂರು : ಕೃಷಿಕರಿಗೆ ಅಗತ್ಯವಿರುವ ಕೃಷಿ ಸಲಕರಣೆಗಳು, ಆಧುನಿಕ ತಂತ್ರಜ್ಞಾನ ಹಾಗೂ ಕೃಷಿ ಸಂಬಂಧಿತ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಉದ್ದೇಶದಿಂದ ಸುರತ್ಕಲ್‌ನಲ್ಲಿ ಪ್ರಥಮ ಬಾರಿಗೆ ಕೃಷಿ ಮೇಳ ಹಾಗೂ ಆಹಾರ ಮೇಳ ಆಯೋಜಿಸಲಾಗಿದೆ ಎಂದು ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ತಿಳಿಸಿದ್ದಾರೆ.

ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸುರತ್ಕಲ್ ಹಾಗೂ ಬಂಟರ ಸಂಘ (ರಿ.) ಸುರತ್ಕಲ್ ಸಹಯೋಗದಲ್ಲಿ ಸೆಪ್ಟೆಂಬರ್ 25ರಿಂದ 27ರವರೆಗೆ ಸುರತ್ಕಲ್‌ನ ಬಂಟರ ಭವನದಲ್ಲಿ ಮೇಳ ನಡೆಯಲಿದೆ. ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಸಾರ್ವಜನಿಕರಿಗೆ ಮೇಳ ವೀಕ್ಷಿಸಲು ಅವಕಾಶವಿದೆ.

ಕೃಷಿ ಕ್ಷೇತ್ರದಲ್ಲಿ ಬಳಕೆಯಾಗುತ್ತಿರುವ ಆಧುನಿಕ ತಂತ್ರಜ್ಞಾನ ಹಾಗೂ ವಿವಿಧ ಕೃಷಿ ಉಪಕರಣಗಳ ಕುರಿತು ಕೃಷಿಕರಿಗೆ ಮಾಹಿತಿ ನೀಡುವುದು ಮೇಳದ ಪ್ರಮುಖ ಉದ್ದೇಶವಾಗಿದೆ. ಕೃಷಿ ಸಲಕರಣೆಗಳ ಪ್ರದರ್ಶನದ ಜತೆಗೆ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಅಗತ್ಯಕ್ಕೆ ಅನುಗುಣವಾದ ಉಪಕರಣಗಳನ್ನು ನೇರವಾಗಿ ವೀಕ್ಷಿಸಿ, ಅವುಗಳ ಬಳಕೆ ಹಾಗೂ ಲಭ್ಯತೆ ಕುರಿತು ಮಾಹಿತಿ ಪಡೆಯಬಹುದಾಗಿದೆ.

ಮನೆ ತೋಟ, ಕೈತೋಟ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿ ಹೊಂದಿರುವವರಿಗೂ ಮೇಳ ಉಪಯುಕ್ತವಾಗಲಿದೆ. ಸಸಿ ಬೆಳೆಸುವಿಕೆ, ತೋಟಗಾರಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

ಕೃಷಿ ಮೇಳದ ಜತೆಗೆ ಆಹಾರ ಮೇಳವೂ ನಡೆಯಲಿದ್ದು, ವಿವಿಧ ಆಹಾರ ಉತ್ಪನ್ನಗಳ ಪರಿಚಯ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೃಷಿ ಹಾಗೂ ಆಹಾರ ಸಂಸ್ಕೃತಿಯ ನಡುವಿನ ಸಂಬಂಧವನ್ನು ಪರಿಚಯಿಸುವ ನಿಟ್ಟಿನಲ್ಲಿ ಆಹಾರ ಮೇಳವೂ ಪ್ರಮುಖ ಆಕರ್ಷಣೆಯಾಗಲಿದೆ.

ಕೃಷಿಕರು, ತೋಟಗಾರಿಕೆ ಆಸಕ್ತರು, ಮಹಿಳೆಯರು, ಯುವಜನರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆಯುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ರೈತ ಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಮಳಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement