Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ತಾಯಿಯನ್ನು ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟು ಹೋದ ಮಗ!

ಉಡುಪಿ : ಹೆತ್ತ ತಾಯಿಯನ್ನು ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ರಸ್ತೆಯಲ್ಲೇ ಬಿಟ್ಟು ಮಗ ತೆರಳಿದ ಹೃದಯವಿದ್ರಾವಕ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಸಮೀಪ 70 ವರ್ಷದ ವೃದ್ಧೆಯೊಬ್ಬರು ದಿಕ್ಕು ತೋಚದೆ, ಯಾರ ಸಹಾಯವೂ ಇಲ್ಲದೆ ಚಡಪಡಿಸುತ್ತಿರುವುದನ್ನು ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಗಮನಿಸಿದರು. ತಕ್ಷಣ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು.

ಮಾಹಿತಿ ಲಭಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ನಿತ್ಯಾನಂದ ಒಳಕಾಡು ಅವರು 112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನಿಂದ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದರು.

ಆಸ್ಪತ್ರೆಗೆ ದಾಖಲಿಸುವ ವೇಳೆ ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ಹಾಗೂ ತಾನು ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ತಿಳಿಸಿದ್ದಾರೆ. ತನ್ನ ಮಗನೇ ಕಾರಿನಲ್ಲಿ ಕರೆದುಕೊಂಡು ಬಂದು ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ.

ಹೆತ್ತ ತಾಯಿಯನ್ನು ಈ ರೀತಿಯಾಗಿ ಅನಾಥಳನ್ನಾಗಿ ರಸ್ತೆಯಲ್ಲಿ ಬಿಟ್ಟು ಹೋದ ಘಟನೆ ಸ್ಥಳೀಯರಲ್ಲಿ ತೀವ್ರ ಬೇಸರ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ವೃದ್ಧೆಯ ಮಾತುಗಳನ್ನು ಆಧರಿಸಿ, ಅವರ ಕುಟುಂಬದವರ ಪತ್ತೆ ಹಾಗೂ ಘಟನೆಗೆ ಸಂಬಂಧಿಸಿದ ವಾಸ್ತವಾಂಶಗಳ ಕುರಿತು ಪರಿಶೀಲನೆ ನಡೆಸಬೇಕಿದೆ.

ಈ ಕುರಿತು ನಿತ್ಯಾನಂದ ಒಳಕಾಡು ಅವರು ಮಹಿಳಾ ಪೊಲೀಸ್ ಠಾಣೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ. ಇದೀಗ ಸರಸ್ವತಿ ಅವರ ಕುಟುಂಬದವರನ್ನು ಪತ್ತೆಹಚ್ಚಿ, ಅವರಿಗೆ ಸೂಕ್ತ ಆಶ್ರಯ ಹಾಗೂ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.

Post a Comment

0 Comments

ಜಾಹೀರಾತು

Responsive Advertisement