Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸೌಜನ್ಯ ಪ್ರಕರಣ ಸುಪ್ರೀಂ ಕೋರ್ಟ್‌ ಮರು ತನಿಖೆ ಆದೇಶವನ್ನು ಮುಕ್ತವಾಗಿ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರ

ಮಂಗಳೂರು : ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಶ್ರೀ ಕ್ಷೇತ್ರದ ದೇವಾಲಯ ಕಚೇರಿಯ ವ್ಯವಸ್ಥಾಪಕ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳೆದ ಹಲವು ವರ್ಷಗಳಿಂದ ಸೌಜನ್ಯ ಪ್ರಕರಣದ ಹೆಸರಿನಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ.

ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದೀಗ ನ್ಯಾಯಾಲಯದ ಆದೇಶದಂತೆ ನಡೆಯಲಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಯಬೇಕು. ತನಿಖೆಯ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ಆಶಯವಾಗಿದೆ ಎಂದು ಪಾರ್ಶ್ವನಾಥ್ ಜೈನ್ ಹೇಳಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement