ಶಿಶಿಲ : ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 23ರಂದು ಬೆಳಕಿಗೆ ಬಂದಿದೆ. ಕಳೆದ ಎರಡು–ಮೂರು ದಿನಗಳಿಂದ ಅವರು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ರಾಧಾಕೃಷ್ಣ ಗುತ್ತು, ಕುಶಾಲಪ್ಪ ಗೌಡ ಬದ್ರಿಜಾಲು, ಸುಬ್ರಾಯ ಗೌಡ ಬದ್ರಿಜಾಲು ಹಾಗೂ ಶೀನಪ್ಪ ನಾಯ್ಕ ಮುಚ್ಚಿರಡ್ಕ ಅವರು ಹುಡುಕಾಟ ನಡೆಸಿದ್ದರು. ಈ ವೇಳೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಇತ್ತೀಚೆಗೆ ತನಿಯಪ್ಪ ಗೌಡ ಅವರ ಪತ್ನಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿತ್ತು. ಸಾವಿಗೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಈ ಬಗ್ಗೆ ಚಿನ್ನಮ್ಮ ಅವರ ಸಹೋದರ ಗಂಗಾಧರ ಗೌಡ ನೀಡಿದ ದೂರಿನ ಮೇರೆಗೆ ಮೃತ್ಯುವಿನಲ್ಲಿ ಸಂಶಯವಿದೆ ಎಂಬ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ತನಿಯಪ್ಪ ಗೌಡ ಅವರ ಸಾವಿನ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತಿ–ಪತ್ನಿಯರ ಎರಡೂ ಸಾವುಗಳಿಗೆ ಸಂಬಂಧಿಸಿದ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಮೃತರು ಮಕ್ಕಳಾದಸತ್ಯಶ್ರೀ ಹಾಗೂ ಆದಿತ್ಯ ಅವರನ್ನು ಅಗಲಿದ್ದಾರೆ.

0 Comments