ಕಾಸರಗೋಡು: 17 ವರ್ಷದ ಬಾಲಕಿ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ 18 ವರ್ಷದ ಸ್ನೇಹಿತನ ವಿರುದ್ಧ ಬೇಡಗ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದಾಳೆ. ಮುಳ್ಳೇರಿಯ ನಿವಾಸಿಯಾದ 18 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಯುವಕ ಮನೆಗೆ ಬಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಇತ್ತೀಚೆಗೆ ಹೊಟ್ಟೆನೋವಿನಿಂದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಳಿಕ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಮವಾರ ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

0 Comments