ಬಂಟ್ವಾಳ : ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಮತ್ತೊಂದು ಪ್ರಕರಣದಲ್ಲಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾಗಿದ್ದ ಕೆಇ ಕಾಯ್ದೆಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಹನೀಫ್, ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣದಲ್ಲಿಯೂ ಈತನ ವಿರುದ್ಧ ವಾರಂಟ್ ಜಾರಿಯಾಗಿತ್ತು.
2026ರ ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್ ಜಗದೀಶ್, ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

0 Comments