Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಮಲಪ್ಪುರಂ ಜಿಲ್ಲೆಯಲ್ಲಿ ವಾಸವಿದ್ದ ಆರೋಪಿಯನ್ನು ಸೆರೆಹಿಡಿದ ವಿಟ್ಲ ಪೊಲೀಸರು


ಮಂಗಳೂರು: ಕಳ್ಳತನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಮಲಪ್ಪುರಂ ಜಿಲ್ಲೆಯ ವಂಡೂರು ನಿವಾಸಿ ರಂಶಿದ್ (40) ಬಂಧಿತ ಆರೋಪಿ.

2019ರಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಘಟನೆ ನಡೆದಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಕಳೆದ 18 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ರಂಶಿದ್ ಕೇರಳದಲ್ಲಿ ತಲೆಮರೆಸಿಕೊಂಡಿದ್ದನು. ಆತ ತನ್ನ ಸ್ವಂತ ಊರಿನಲ್ಲೇ ಸಂಚರಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಮಾಹಿತಿಯ ಆಧಾರದಲ್ಲಿ ಎಎಸ್‌ಐ ಜಯರಾಮ್ ಮತ್ತು ಸಿಪಿಸಿ ಶಿವಾನಂದ ಅವರನ್ನೊಳಗೊಂಡ ಪೊಲೀಸ್ ತಂಡ ವಂಡೂರಿನಲ್ಲಿರುವ ಆತನ ಮನೆಗೆ ತೆರಳಿ ಬಂಧಿಸಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ರಂಶಿದ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement