Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬೆಳ್ತಂಗಡಿಯಲ್ಲಿ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ನಾವೂರಿನಲ್ಲಿ ವೈದ್ಯರೊಬ್ಬರು ನಡೆಸುತ್ತಿದ್ದ ಕ್ಲಿನಿಕ್‌ಗೆ ಬೆಂಕಿ ಹಚ್ಚಿ ಔಷಧಗಳು ಹಾಗೂ ವೈದ್ಯಕೀಯ ಉಪಕರಣಗಳನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಡ ಗ್ರಾಮದ ಡಾ. ಪ್ರದೀಪ ಎ. (51) ಅವರು ನಾವೂರಿನಲ್ಲಿ ನಡೆಸುತ್ತಿದ್ದ ಕ್ಲಿನಿಕ್‌ಗೆ ಅಕ್ಟೋಬರ್ 6ರಂದು ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಔಷಧಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಅಂದಾಜು 2ರಿಂದ 3 ಲಕ್ಷ ರೂ. ಮೌಲ್ಯದ ಸೊತ್ತುಗಳು ಸುಟ್ಟುಹೋಗಿದ್ದವು.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ನಾವೂರು ನಿವಾಸಿಗಳಾದ ರವಿ ಕುಮಾರ್ (31), ಸುರೇಶ್ ಪಿ.ಎನ್. (44) ಮತ್ತು ದಿನೇಶ್ ಪ್ರಭು (51) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement