Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಚೇರ್ಕಬೆ ಶ್ರೀ ಶಾಸ್ತಾರ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಅ.24ರಂದು 2028ರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಿದ್ಧತೆ ಕುರಿತು ಸಮಾಲೋಚನಾ ಸಭೆ

ಪೆರ್ಲ : ಕಜಂಪಾಡಿ ಸಮೀಪದ ಚೇರ್ಕಬೆ ಶ್ರೀ ಶಾಸ್ತಾರ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ 2028ನೇ ಇಸವಿಯಲ್ಲಿ ನಡೆಸಲು ಉದ್ದೇಶಿಸಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ, ದೇವಾಲಯದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ ಉತ್ಸವವನ್ನು ಯಶಸ್ವಿಯಾಗಿ ನೆರವೇರಿಸುವ ಕುರಿತು ಭಕ್ತಜನರ ಸಮಾಲೋಚನಾ ಸಭೆಯನ್ನು ಅಕ್ಟೋಬರ್ 24ರಂದು ಬೆಳಗ್ಗೆ 10.30ಕ್ಕೆ ಶ್ರೀಕ್ಷೇತ್ರದಲ್ಲಿ ಆಯೋಜಿಸಲಾಗಿದೆ.

ಶ್ರೀ ಶಾಸ್ತಾರ ಸುಬ್ರಹ್ಮಣೇಶ್ವರ ಸೇವಾ ಟ್ರಸ್ಟ್ (ರಿ.) ಚೇರ್ಕಬೆ ಇದರ ಆಶ್ರಯದಲ್ಲಿ ಬಲಿವಾಡು ಕೂಟದೊಂದಿಗೆ ನಡೆಯಲಿರುವ ಈ ಸಭೆಯಲ್ಲಿ ಬ್ರಹ್ಮಕಲಶೋತ್ಸವದ ಸಿದ್ಧತೆ, ದೇವಾಲಯದ ಅಭಿವೃದ್ಧಿ ಕಾರ್ಯಗಳು ಹಾಗೂ ಉತ್ಸವದ ಯಶಸ್ವಿ ಆಯೋಜನೆ ಕುರಿತು ಚರ್ಚೆ ನಡೆಯಲಿದೆ.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಭಕ್ತಿಪೂರ್ವಕವಾಗಿ ನೆರವೇರಿಸುವ ನಿಟ್ಟಿನಲ್ಲಿ ಭಕ್ತಾದಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ಟ್ರಸ್ಟ್‌ನ ಗೌರವಾಧ್ಯಕ್ಷ ರಾಜಾರಾಮ ಪೆರ್ಲ, ಅಧ್ಯಕ್ಷ ಕೋಟೆ ಕೃಷ್ಣ ಭಟ್ಟ ಹಾಗೂ ಆಡಳಿತ ಮಂಡಳಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. 

Post a Comment

0 Comments

ಜಾಹೀರಾತು

Responsive Advertisement