ಪುತ್ತೂರು: ಓವರ್ಟೇಕ್ ಮಾಡುವ ಭರದಲ್ಲಿ ಸಂಭವಿಸಿದ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇಂದು ಸಂಭವಿಸಿದ ಈ ಅಪಘಾತದಲ್ಲಿ ಲಾರಿ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆಯಲ್ಲೇ ಮಗುಚಿಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಎದುರಾಯಿತು.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಘಟನೆಯಿಂದಾಗಿ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ನಿಧಾನಗೊಂಡಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸುಗಮಗೊಳಿಸಲು ಕ್ರಮ ಕೈಗೊಂಡರು.
.jpeg)
0 Comments